ಕರ್ನಾಟಕ

karnataka

ETV Bharat / state

ಸೋಂಕು ಕಡಿಮೆಯಾದ ಬಳಿಕ ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ತೀರ್ಮಾನ: ಸಚಿವ ಸುರೇಶ್ ಕುಮಾರ್

ಕೊರೊನಾ ಟೆಸ್ಟ್ ಕಡಿಮೆ ಮಾಡಿಲ್ಲ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು, ಪ್ರಾಥಮಿಕ ಸಂಪರ್ಕಿತರನ್ನು ಹೆಚ್ಚು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕೊರೊನಾ ಸೋಂಕು ಕಡಿಮೆಯಾದ ಬಳಿಕ‌ ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

By

Published : May 17, 2021, 2:18 PM IST

ಚಾಮರಾಜನಗರ: ಕೊರೊನಾ ಸೋಂಕು ಕಡಿಮೆಯಾದ ಬಳಿಕ‌ ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಸಚಿವ ಸುರೇಶ್ ಕುಮಾರ್

ಹನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂಬೈನಂತಹ ಮಹಾನಗರಿಯಲ್ಲೇ ಕೊರೊನಾ ಕಡಿಮೆಯಾಗಿದೆ. ನಮ್ಮಲ್ಲೂ ಸೋಂಕಿನ ಪ್ರಮಾಣ ಇಳಿಯಲಿದೆ. ವಿದ್ಯಾರ್ಥಿಗಳ ಯೋಗಕ್ಷೇಮ ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು, ಸೋಂಕು ಕಡಿಮೆಯಾಗಲೆಂದು ಆಶಿಸೋಣ ಎಂದರು.

ಕೊರೊನಾ ಟೆಸ್ಟ್ ಕಡಿಮೆ ಮಾಡಿಲ್ಲ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು, ಪ್ರಾಥಮಿಕ ಸಂಪರ್ಕಿತರನ್ನು ಹೆಚ್ಚು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಸೋಂಕು ಇಳಿಮುಖಗೊಂಡು ಮರಣ ಪ್ರಮಾಣ ತಗ್ಗಿಸುವುದರತ್ತ ಕೆಲಸ ಮಾಡುತ್ತಿದ್ದೇವೆ. ಪರೀಕ್ಷೆ ಸಂಖ್ಯೆ ಕಡಿಮೆ ಮಾಡಿಲ್ಲ ಎಂದು ಹೇಳಿದರು.

ಹೈಕೋರ್ಟ್​ಗೆ ತನಿಖಾ ತಂಡ ವರದಿ ನೀಡಿದ್ದು, ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಲಿದೆ. ಮೃತಪಟ್ಟವರಿಗೆ ಪರಿಹಾರ ನೀಡುವ ಸಂಬಂಧ ಸರ್ಕಾರದ ನಿಲುವಿನ ಬಗ್ಗೆ ಚಿಂತಿಸಲಾಗುತ್ತಿದ್ದು ಸಿಎಂ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

ABOUT THE AUTHOR

...view details