ಚಾಮರಾಜನಗರ:6 ವರ್ಷದ ಬಾಲಕಿ ಮೇಲೆ ಅಪ್ರಾಪ್ತನೋರ್ವ ಪೈಶಾಚಿಕ ಕೃತ್ಯ ಎಸಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾವು ತಿಂದು ಕೇಡು ಬಗೆದ: ಬಾಲಕಿ ಮೇಲೆ ಅಪ್ರಾಪ್ತನಿಂದ ಪೈಶಾಚಿಕ ಕೃತ್ಯ! - undefined
ಅಜ್ಜಿ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
![ಮಾವು ತಿಂದು ಕೇಡು ಬಗೆದ: ಬಾಲಕಿ ಮೇಲೆ ಅಪ್ರಾಪ್ತನಿಂದ ಪೈಶಾಚಿಕ ಕೃತ್ಯ!](https://etvbharatimages.akamaized.net/etvbharat/prod-images/768-512-3410536-thumbnail-3x2-rapet.jpg)
ಬಾಲಕಿ
17 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ. ತಂದೆ-ತಾಯಿ ಊಟಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವುದರಿಂದ ಬಾಲಕಿ ಅಜ್ಜಿ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ತಿಳಿದುಬಂದಿದೆ. ಆರೋಪಿಯು ಬಾಲಕಿಯ ಸಂಬಂಧಿಯಾಗಿದ್ದು, ಆಕೆಯೊಂದಿಗೆ ಮಾವಿನಕಾಯಿ ತಿಂದು ಬಳಿಕ ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಬಾಲಕಿಗೆ ತೀವ್ರ ರಕ್ತಸ್ರಾವ ಆಗಿದ್ದರಿಂದ ವಿಚಾರ ಬಹಿರಂಗಗೊಂಡಿದ್ದು, ಬಾಲಕಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಿಚಾರಣೆಗೊಳಪಡಿಸಿದ್ದಾರೆ.