ಗುಂಡ್ಲುಪೇಟೆ (ಚಾಮರಾಜನಗರ): ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಹಾಗೂ ಅವರ ಪತ್ನಿ ಪಟ್ಟಣದ ಹೊರವಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ನಿರಂಜನ್ ಕುಮಾರ್ - ಗುಂಡ್ಲುಪೇಟೆ ರಾಘವೇಂದ್ರ ಸ್ವಾಮಿ ಮಠ
ಯಾರಿಗಾದರೂ ಆರೋಗ್ಯದಲ್ಲಿ ಏರುಪೇರಾದರೆ, ನಿರ್ಲಕ್ಷ್ಯ ಮಾಡದೆ ಪಕ್ಕದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬೇಕು ಎಂದು ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಸೂಚಿಸಿದ್ದಾರೆ.

ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಸಿ.ಎಸ್.ನಿರಂಜನ್ ಕುಮಾರ್
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿತರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ. ಆದ್ದರಿಂದ ಎಲ್ಲರೂ ಧೈರ್ಯವಾಗಿರಬೇಕು ಹಾಗೂ ನಿಯಮ ಪಾಲನೆ ಮಾಡಿ ಸೋಂಕಿನಿಂದ ಪಾರಾಗಬೇಕು ಎಂದರು.
ಇನ್ನು, ಯಾರಿಗಾದರೂ ಆರೋಗ್ಯದಲ್ಲಿ ಏರುಪೇರಾದರೆ, ನಿರ್ಲಕ್ಷ್ಯ ಮಾಡದೆ ಪಕ್ಕದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬೇಕು ಎಂದು ಸೂಚಿಸಿದರು.