ಚಾಮರಾಜನಗರ:ಬಿಜೆಪಿಯ ಎಲ್ಲಾ ಶಾಸಕರು ಬಿ.ಎಸ್.ಯಡಿಯೂರಪ್ಪ ಅವರ ಪರವಿದ್ದೇವೆ. ಹೀಗಿರುವಾಗ ಅವರ ಪರ ಸಹಿ ಸಂಗ್ರಹಿಸುವ ಅಗತ್ಯವಿಲ್ಲ. ಯಡಿಯೂರಪ್ಪ ಅವರೇ ಅವಧಿ ಪೂರ್ಣವಾಗುವವರೆಗೂ ಮುಖ್ಯಮಂತ್ರಿಯಾಗಿರಲಿದ್ದಾರೆ. ಯಡಿಯೂರಪ್ಪ ಅವರೇ ನಮ್ಮ ನಾಯಕರು, ಅವರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು.
ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ, ಮುಂಬರುವ ಚುನಾವಣೆಗೂ ಸಹ ಅವರೇ ನಾಯಕತ್ವ ವಹಿಸಲಿದ್ದಾರೆ. ಹೀಗಿರುವಾಗ ಯಡಿಯೂರಪ್ಪ ಅವರ ಪರ ಸಚಿವ ರೇಣುಕಾಚಾರ್ಯ ಸಹಿ ಸಂಗ್ರಹಿಸುವ ಅಗತ್ಯವಿಲ್ಲ. ನನ್ನನ್ನೂ ಸಹ ಅವರು ಸಹಿ ವಿಚಾರದಲ್ಲಿ ಸಂಪರ್ಕಿಸಿಲ್ಲ ಎಂದರು.