ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ ಆಗಿದೆ. ಇದೊಂದು ಹುಚ್ಚನ ಮದುವೆ ಇದ್ದಂತೆ ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ಸಿ.ಎಸ್.ನಿರಂಜನ ಕುಮಾರ್ ಲೇವಡಿ ಮಾಡಿದ್ದಾರೆ.
ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ಈಗ ಫೇಸ್ ವ್ಯಾಲ್ಯೂ ಇಲ್ಲ. ಜನರಿಗೆ ಈಗಾಗಲೇ ಅವರ ಕ್ಷಮತೆ ಬಗ್ಗೆ ಅರ್ಥವಾಗಿದೆ. ಇವರ ಕೈಯಲ್ಲಿ ದೇಶ ನಡೆಸಲು ಆಗ್ತಾ ಇಲ್ಲ ಎಂಬುದು ಗೊತ್ತಾಗಿದೆ. ಅವರ ಯಾತ್ರೆಯಿಂದ ಬಿಜೆಪಿಗೆ ಯಾವುದೇ ರೀತಿ ನಷ್ಟ ಇಲ್ಲ ಎಂದು ಕಿಡಿಕಾರಿದರು.
ಗುಂಡ್ಲುಪೇಟೆ ಬಿಜೆಪಿ ಶಾಸಕ ಸಿ.ಎಸ್.ನಿರಂಜನ ಕುಮಾರ್ ಸುದ್ದಿಗೋಷ್ಠಿ ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಹರಿದು ಹಾಕಿದ್ದಾರೆ ಎನ್ನುತ್ತಾರೆ. ಆ ರೀತಿ ಸಣ್ಣತನಕ್ಕೆ ನಾವು ಇಳಿಯಲ್ಲ. ಅನುಮತಿ ಪಡೆಯದೆ ಎಲ್ಲಾ ಕಡೆ ಫ್ಲೆಕ್ಸ್ ಅಳವಡಿಸಲಾಗಿದೆ. ಅಧಿಕಾರಿಗಳಿಗೆ ಹೇಳಿ ಎಲ್ಲವನ್ನೂ ತೆರವು ಮಾಡಿಸಬಹುದು. ಆದರೆ ನಾವು ಕೀಳುಮಟ್ಟದ ರಾಜಕಾರಣ ಮಾಡಲ್ಲ ಎಂದು ಡಿಕೆಶಿ ಆರೋಪಗಳಿಗೆ ತಿರುಗೇಟು ನೀಡಿದರು.
ಇದನ್ನೂ ಓದಿ:ನಾಳೆ ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಆಗಮನ: ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು