ಕೊಳ್ಳೇಗಾಲ:ಶಾಸಕ ಎನ್.ನ್.ಮಹೇಶ್ ಧರ್ಮಪತ್ನಿ ವಿಜಯಾ ಮಹೇಶ್ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ವಿಜಯಾ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ತಡರಾತ್ರಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಬೆಂಗಳೂರಿನ ಜೆ.ಪಿ ನಗರದ ಆರ್.ವಿ ಆಸ್ಟರ್ ಆಸ್ಪತ್ರೆಯಲ್ಲಿ ಅವರು ಕೊನೆ ಉಸಿರೆಳೆದಿದ್ದಾರೆ.
ವಿಜಯಾ ಅವರು ಕಳೆದ ಒಂದೂವರೆ ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿ, ಆರ್.ವಿ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮೂರು ದಿನಗಳ ಹಿಂದಷ್ಟೆ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಐಸಿಯು ವಾರ್ಡ್ನಿಂದ ಜನರಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಭಾನುವಾರ ತಡರಾತ್ರಿ 12.30ರ ವೇಳೆಗೆ ಮತ್ತೆ ತೀವ್ರ ಏರುಪೇರಾಗಿ ಅವರು ಇಹಲೋಕ ತ್ಯಜಿಸಿದ್ದಾರೆ.