ಗುಂಡ್ಲುಪೇಟೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿರುವ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ದ್ವಿತೀಯ ಪಿಯುಸಿ ಸಾಧನೆ: ವಿದ್ಯಾರ್ಥಿಗಳಿಗೆ ಶುಭ ಕೋರಿದ ನಿರಂಜನ್ ಕುಮಾರ್ - ಗುಂಡ್ಲುಪೇಟೆ ಶಾಸಕ ಸಿಎಸ್ ನಿರಂಜನ್ ಕುಮಾರ್
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಿಂದ ಜಿಲ್ಲೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವ ಚಂದನ. ಆರ್ (97.33), ಅಂಜು.ಎಂ (88%.), ರಾಜು.ಆರ್ (93.50%.) ಮನೆಗಳಿಗೆ ಭೇಟಿ ಶುಭಕೋರಿ ವಿದ್ಯಾಭ್ಯಾಸದ ಕುರಿತು ವಿಚಾರಿಸಿದ್ದಾರೆ.
ಬಳಿಕ ಮಾತನಾಡಿದ ಶಾಸಕರು, ಪೋಷಕರು ಕಷ್ಟಪಟ್ಟದ್ರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಉತ್ತಮ ಶಿಕ್ಷಣ ನೀಡುವುದೇ ನೀವು ಅವರಿಗೆ ಮಾಡುವ ಆಸ್ತಿ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಂಬ ಕೀಳರಿಮೆ ಇಟ್ಟುಕೊಳ್ಳಬೇಡಿ ನಗರ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುವಂತೆ ಅಭ್ಯಾಸ ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.