ಕೊಳ್ಳೇಗಾಲ:ನಿನ್ನೆ ಸುರಿದ ಭಾರೀ ಮಳೆಗೆ ಪ್ರವಾಹದ ಆತಂಕ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದ ಮತ್ತು ಜಮೀನುಗಳು ಜಲಾವೃತವಾಗಿದ್ದತಾಲೂಕಿನ ಮುಳ್ಳೂರು, ಹಳೇ ಅಣಗಳ್ಳಿ, ದಾಸನಪುರ, ಹಳೇ ಹಂಪಾಪುರ ಗ್ರಾಮಗಳಿಗೆ ಶಾಸಕ ಎನ್.ಮಹೇಶ್ ಅವರು ಭೇಡಿ ನೀಡಿ ಪರಿಶೀಲನೆ ನಡೆಸಿದರು.
ತಗ್ಗು ಪ್ರದೇಶದಲ್ಲಿರುವ ಜಮೀನುಗಳು ನೀರಿನಿಂದ ಆವೃತವಾಗಿ ಅಪಾರ ಹಾನಿಯಾಗಿದೆ. ಎಷ್ಟು ಎಕರೆ ಜಮೀನು ನೀರಿಗೆ ಆಹುತಿಯಾಗಿದೆ ಎಂಬುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಬಗ್ಗೆ ಮಾತನಾಡಿದ ಅವರು, ಕಬಿನಿ ಮತ್ತು ಕೆಆರ್ಎಸ್ ಜಲಾಶಯಗಳಿಂದ ಅಧಿಕ ನೀರನ್ನು ಹೊರ ಬಿಟ್ಟ ಪರಿಣಾಮ ಜಮೀನುಗಳಿಗೆ ನೀರು ನುಗ್ಗಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ ಎಂದರು.