ಚಾಮರಾಜನಗರ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿರುವುದು ಹೆಮ್ಮೆಯ ವಿಚಾರ ಎಂದು ಪುತ್ರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ನಾಮಪತ್ರ ಸಲ್ಲಿಕೆ ಹೆಮ್ಮೆಯ ವಿಚಾರ: ಪುತ್ರ ಪ್ರಿಯಾಂಕ್ - aicc president election
ದೇಶದ ಅತ್ಯಂತ ಹಿರಿಯ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗರೊಬ್ಬರು ಸ್ಪರ್ಧಿಸಿರುವುದು ನಮ್ಮ ಕುಟುಂಬಕ್ಕೆ, ರಾಜ್ಯಕ್ಕೆ ಹೆಮ್ಮೆಯ ವಿಚಾರ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಶಾಸಕ ಪ್ರಿಯಾಂಕ್ ಖರ್ಗೆ
ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ದೇಶದ ಅತ್ಯಂತ ಹಳೆಯ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗರೊಬ್ಬರು ಸ್ಪರ್ಧಿಸಿರುವುದು ನಮ್ಮ ಕುಟುಂಬಕ್ಕೆ, ರಾಜ್ಯಕ್ಕೆ ಹೆಮ್ಮೆಯ ವಿಚಾರ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ನಾಯಕರು ತಂದೆಯವರಿಗೆ ಬೆಂಬಲ ಕೊಟ್ಟಿದ್ದಾರೆ. ಚುನಾವಣೆಗೆ ಎದುರು ನೋಡುತ್ತಿದ್ದೇನೆ ಎಂದರು.
ಓದಿ:ಹುಬ್ಬಳ್ಳಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗೌನ್ ಗದ್ದಲ: ಅನಿಷ್ಟಾವಧಿವರೆಗೆ ಸಭೆ ಮುಂದೂಡಿಕೆ