ಚಾಮರಾಜನಗರ: ಕೃಷಿ ಕಾನೂನು ಜಾರಿಗಳಿಸಿರುವುದು ಬಿಜೆಪಿ ಮತ್ತು ಆರ್ಎಸ್ಎಸ್ ಅಜೆಂಡಾ. ಬಿಜೆಪಿಯು ಈಸ್ಟ್ ಇಂಡಿಯಾ ಕಂಪನಿಗಿಂತಲು ಅಪಾಯಕಾರಿಯಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದರು.
ನಗರದ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮೂರು ಕೃಷಿ ಕಾನೂನು ಜಾರಿಗಳಿಸಿರುವುದು ಬಿಜೆಪಿ ಮತ್ತು ಆರ್ಎಸ್ಎಸ್ ಅಜೆಂಡಾ ಆಗಿದೆ. ದೇಶವನ್ನು ಖಾಸಗೀಕರಣ ಮಾಡಬೇಕೆನ್ನುವ ಹುನ್ನಾರದಿಂದ ಉತ್ಪಾದನೆ, ಉದ್ದಿಮೆ, ವಾಣಿಜ್ಯ, ವಿತರಣೆಯನ್ನು ಕಾರ್ಪೋರೇಟ್ ಕಂಪನಿಗಳಿಗೆ ವಹಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಬಿಜೆಪಿಯು ಈಸ್ಟ್ ಇಂಡಿಯಾ ಕಂಪನಿಗಿಂತಲು ಅಪಾಯಕಾರಿಯಾಗಿದೆ ಎಂದು ಕಿಡಿಕಾರಿದರು.
ಮೋದಿ ಸರ್ಕಾರ ಈಸ್ಟ್ ಇಂಡಿಯಾ ಕಂಪನಿಗಿಂತಲೂ ಅಪಾಯಕಾರಿ: ಕೋಡಿಹಳ್ಳಿ ಚಂದ್ರಶೇಖರ್ ಗಣರಾಜ್ಯೋತ್ಸವದ ದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನಡೆಸಿ ನಾಡಿಗೆ ಸಂದೇಶ ಸಾರಲಿ. ಇತ್ತ ಮೂರು ಕೃಷಿ ಕಾನೂನು ಹಿಂಪಡೆಯಬೇಕೆಂದು ಒತ್ತಾಯಿಸಿ 25 ಸಾವಿರ ರೈತರು ಪರೇಡ್ ನಡೆಸಲಿದ್ದಾರೆ. ಆದ್ರೆ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘದ ವಿರುದ್ಧ ಬಿಜೆಪಿ ಅಪಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಓದಿ-ಪಿಯು ಇಲಾಖೆ ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ: ಸಚಿವ ಸುರೇಶ್ ಕುಮಾರ್
ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪರೇಡ್‍ನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ರೈತರು ಭಾಗವಹಿಸುತ್ತಿದ್ದಾರೆ. ಚಾಮರಾಜನಗರದಿಂದ ಯುವ ರೈತರು ಸಮುದಾಯವನ್ನು ಒಗ್ಗೂಡಿಸಿಕೊಂಡು ಕರೆತರಬೇಕು ಎಂದು ಮನವಿ ಮಾಡಿದರು.