ಚಾಮರಾಜನಗರ: ಏಪ್ರಿಲ್ 9 ರಂದು ಮೈಸೂರಿನಲ್ಲಿ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ನೆರವೇರಿಸಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡುವ ಸಾಧ್ಯತೆ ದಟ್ಟವಾಗಿದೆ. 1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ್ದು, ಯೋಜನೆಯಲ್ಲಿ ಬಂಡೀಪುರವೂ ಸೇರಿದೆ. ಇದರ ಜೊತೆಗೆ, ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳಿರುವ ಸಂರಕ್ಷಿತ ಪ್ರದೇಶವೂ ಇದಾಗಿದೆ. ಅಷ್ಟೇ ಅಲ್ಲದೇ, ಕೆಲವು ದಿನಗಳ ಹಿಂದೆಯಷ್ಟೇ ಆನೆಯನ್ನು ಬದುಕಿಸಿದ್ದ ಅರಣ್ಯಾಧಿಕಾರಿಗಳ ಕ್ರಮವನ್ನು ಮೋದಿ ಶ್ಲಾಘಿಸಿದ್ದರು.
ಮೈಸೂರಿನಿಂದ ಕಾರ್ಯಕ್ರಮ ಮುಗಿಸಿ ನೇರವಾಗಿ ಬಂಡೀಪುರಕ್ಕೆ ನರೇಂದ್ರ ಮೋದಿ ಬಂದಿಳಿಯಲಿದ್ದು, ಸಫಾರಿ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ತಯಾರಿ ನಡೆಸುತ್ತಿದ್ದು, ಬಂಡೀಪುರಕ್ಕೆ ಹೋಗುವ ರಸ್ತೆ ಮಧ್ಯೆ ಸಿಗುವ ಸಫಾರಿ ಕೇಂದ್ರದ ಬಳಿ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗುತ್ತಿದೆ. ರಸ್ತೆ ದುರಸ್ತಿಯೂ ನಡೆಯುತ್ತಿದೆ.
ಇದನ್ನೂ ಓದಿ:ವಿದ್ಯುತ್ ಶಾಕ್ನಿಂದ ಆನೆ ಬಚಾವ್ - ಟ್ವೀಟ್ ಮಾಡಿ ಪ್ರಧಾನಿ ಮೋದಿ ಸಂತಸ..ನೆಟಿಜೆನ್ಸ್ ಫಿದಾ