ಕರ್ನಾಟಕ

karnataka

ETV Bharat / state

ಪಕ್ಷ ಪ್ರೇಮ ದಾಟಿ ನೆರೆ ಸಂತ್ರಸ್ತರ ಪರ ನಿಂತ ಬಿಜೆಪಿ ಸಂಸದ ಶ್ರೀನಿವಾಸ್​ ಪ್ರಸಾದ್​... ಮೋದಿ ವಿರುದ್ಧ ವಾಗ್ದಾಳಿ - ಚಾಮರಾಜನಗರ

ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರನ್ನು ಒಮ್ಮೆಯೂ ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸಿಲ್ಲ. ನೆರೆ ಪರಿಹಾರ ಕೊಡಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ಅಸಹಾಯಕವಾಗಿದೆ. ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ವಿಳಂಬ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಸಂಸದ ವಿ ಶ್ರೀನಿವಾಸ್​ ಪ್ರಸಾದ್ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಕ್​ಪ್ರಹಾರ ನಡೆಸಿದರು.

ಸಂಸದ ವಿ ಶ್ರೀ ಗರಂ

By

Published : Oct 4, 2019, 4:29 PM IST

ಚಾಮರಾಜನಗರ:ನೆರೆ ಪರಿಹಾರ ವಿಚಾರದಲ್ಲಿ ಆಗುತ್ತಿರುವ ವಿಳಂಬದ ವಿರುದ್ಧ ಬಿಜೆಪಿ ಸಂಸದ ವಿ ಶ್ರೀನಿವಾಸ್​ ಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಕಣ್ಣು ಮುಚ್ಚಿ ಕುಳಿತಿಲ್ಲ. ನಿಮ್ಮೆಲ್ಲಾ ಆಟ-ಪಾಠ ನೋಡುತ್ತಿದ್ದಾರೆ. ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗರಂ ಆದರು.

ಸಂಸದ ವಿ ಶ್ರೀ ಗರಂ

ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರು ಏನು ಮಾಡಬೇಕು. ಒಮ್ಮೆಯೂ ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸಿಲ್ಲ. ನೆರೆ ಪರಿಹಾರ ಕೊಡಿಸುವಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅಸಹಾಯಕರಾಗಿದ್ದಾರೆ ಎಂದು ವಾಕ್​ಪ್ರಹಾರ ನಡೆಸಿದರು.

ಈಗಾಗಲೇ ಸರ್ವಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ಯಬೇಕಿತ್ತು. ಆದರೆ, ಕೇಂದ್ರ ಸಚಿವರು ಹಾರಿಕೆ ಉತ್ತರ ನೀಡುತ್ತಾ ಸಬೂಬು ಹೇಳುತ್ತಿದ್ದಾರೆ. ನಮಗೂ ಒಂದು ಮಿತಿಯಿದೆ. ಮಾತನಾಡಲೇ ಬೇಕಿದೆ ಎಂದು ತಿಳಿಸಿದರು.

ABOUT THE AUTHOR

...view details