ಕರ್ನಾಟಕ

karnataka

ಬೆಂಬಲಿಗರೊಂದಿಗೆ ಗುಪ್ತ ಸಭೆ : 'ಕಮಲ' ಮುಡಿಯಲು ಸಜ್ಜಾದ್ರಾ ಕೊಳ್ಳೇಗಾಲ ಶಾಸಕ ಎನ್‌ ಮಹೇಶ್!?

By

Published : Jul 17, 2021, 9:20 PM IST

ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಗೂ ಮುನ್ನ ಶಾಸಕ ಮಹೇಶ್ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎನ್ನಲಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಮಹೇಶ್ ಕೆಲ ತಿಂಗಳ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು..

n-mahesh-secret-meeting-with-supporters
ಶಾಸಕ ಮಹೇಶ್

ಚಾಮರಾಜನಗರ :‌ ಬೆಂಬಲಿಗರೊಂದಿಗೆ ಕೊಳ್ಳೇಗಾಲ ಶಾಸಕ ಎನ್​. ಮಹೇಶ್​​ ಗುಪ್ತ ಸಭೆ ನಡೆಸಿದ್ದಾರೆ. ಬಿಜೆಪಿ ಪಕ್ಷ ಸೇರಲು ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೊಳ್ಳೇಗಾಲ ತಾಲೂಕಿನ ಕುರುಬನಕಟ್ಟೆಯಲ್ಲಿ ಇಂದು ಮಧ್ಯಾಹ್ನ ಸುಮಾರು 50ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸೇರುವ ಚಿಂತನೆ ನಡೆಸುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿಯಾಗಬೇಕೆಂದರೆ ಆಡಳಿತ ಪಕ್ಷದಲ್ಲಿರುವುದು ಸೂಕ್ತ. ಬೆಂಬಲಿಗರು ಸಮ್ಮತಿಸಿದರೇ ಬಿಜೆಪಿ ಸೇರುವುದಾಗಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಬೆಂಬಲಿಗರು ಸಹಮತ ವ್ಯಕ್ತಪಡಿಸಿದ್ದು, ಬಿಜೆಪಿ ಸೇರಲು ಯಾವುದೇ ಅಭ್ಯಂತರವಿಲ್ಲ ವ್ಯಕ್ತಪಡಿಸಿಲ್ಲವಂತೆ. ಆದ್ರೆ, ಬೇರೆ ಜಿಲ್ಲೆಯ ಬೆಂಬಲಿಗರ ಜೊತೆಯೂ ಸಮಾಲೋಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ‌ ಶಾಸಕರು ತಿಳಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಗೂ ಮುನ್ನ ಶಾಸಕ ಮಹೇಶ್ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎನ್ನಲಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಮಹೇಶ್ ಕೆಲ ತಿಂಗಳ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಅದಾದ ಬಳಿಕ, ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸದನಕ್ಕೆ ಗೈರಾಗಿ ಬಿಎಸ್​ಪಿ ನಾಯಕಿ ಮಾಯವತಿ ಅವರ ಕೆಂಗಣ್ಣಿಗೆ ಗುರಿಯಾಗಿ ಉಚ್ಛಾಟನೆಗೊಂಡಿದ್ದರು.

ABOUT THE AUTHOR

...view details