ಕೊಳ್ಳೇಗಾಲ: ಕೊರೊನಾ ಸೋಂಕು ತಡೆಗೆ ಸುರಕ್ಷತೆಗಾಗಿ ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಜಿಲ್ಲಾ ಸಹಕಾರ ಬ್ಯಾಂಕ್ ವತಿಯಿಂದ ವೈದ್ಯರು, ಪೊಲೀಸರಿಗೆ 3,000 ಮಾಸ್ಕ್ ಮತ್ತು ಸ್ಯಾನಿಟೈಸರ್ಗಳನ್ನು ಶಾಸಕ ಆರ್.ನರೇಂದ್ರ ನೇತೃತ್ವದಲ್ಲಿ ವಿತರಿಸಲಾಯಿತು.
ಸಹಕಾರ ಬ್ಯಾಂಕ್ ವತಿಯಿಂದ ಪೊಲೀಸರು, ಆರೋಗ್ಯ ಸಿಬ್ಬಂದಿಗೆ ಮಾಸ್ಕ್-ಸ್ಯಾನಿಟೈಸರ್ ವಿತರಣೆ - ಕೊರೊನಾ ವೈರಸ್ ತಡೆಗೆ ಲಾಕ್ಡೌನ್
ಪೊಲೀಸರು ಮತ್ತು ವೈದ್ಯರ ಆರೋಗ್ಯ ದೃಷ್ಟಿಯಿಂದ ಮಾಸ್ಕ್ ಮತ್ತು ಸಾನಿಟೈಸರ್ ಕಿಟ್ ವಿತರಣೆ ಮಾಡುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ನರೇಂದ್ರ ಹೇಳಿದ್ದಾರೆ.
ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಶಾಸಕ ನರೇಂದ್ರ
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಕೊರೊನಾ ವೈರಸ್ ವಿರುದ್ಧ ಪ್ರಾಣದ ಹಂಗು ತೊರೆದು ಆರೋಗ್ಯ ಮತ್ತು ಪೊಲೀಸ್ ಇಲಾಖೆ, ಪೌರಕಾರ್ಮಿಕರು ದಿನವಿಡೀ ನಿಸ್ವಾರ್ಥ ಮನೋಭಾವದಿಂದ ದುಡಿಯುತ್ತಿದ್ದಾರೆ. ಅವರ ಆರೋಗ್ಯದ ದೃಷ್ಟಿಯಿಂದ ಈ ಕೆಲಸ ಮಾಡಲಾಗಿದೆ ಎಂದರು.