ಚಾಮರಾಜನಗರ:ತಂದೆ-ತಾಯಿ ಎಂಬ ಪದಕ್ಕೆ ಅಪಮಾನ ಎಂಬಂತೆ ಖಾಲಿ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ.
ಅಮ್ಮಾ ಇದು ನ್ಯಾಯವೇ?.. ಖಾಸಗಿ ಆಸ್ಪತ್ರೆ ನೀರಿನ ತೊಟ್ಟಿಯಲ್ಲಿ ಶಿಶು ಶವ ಪತ್ತೆ
ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯ ಖಾಲಿ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ಅಂದಾಜು 6 ದಿನದ ಗಂಡು ಶಿಶು ಇದಾಗಿದ್ದು ಕರುಳಬಳ್ಳಿ ಕತ್ತರಿಸದೇ ಹಾಗೆ ಬಿಟ್ಟಿದ್ದು ಅಂಗವೈಕಲ್ಯ ಹೊತ್ತು ಜನಿಸಿರುವ ಕಾರಣ ಹೆತ್ತವರು ಪ್ಲಾಸ್ಟಿಕ್ ಕವರ್ನಲ್ಲಿ ಮಗುವನ್ನು ಹಾಕಿ ಬಿಸಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಆಸ್ಪತ್ರೆ ಸಿಬ್ಬಂದಿ ಶವಾಗಾರದ ಬಳಿ ಹೋದಾಗ ದುರ್ನಾತ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರಿನಲ್ಲಿ ಶಿಶು ಶವ ಪತ್ತೆಯಾಗಿದೆ. ಆಸ್ಪತ್ರೆಯಲ್ಲೇ ಹೆರಿಗೆಯಾಗಿದ್ದರೆ ಕರುಳ ಬಳ್ಳಿಯನ್ನು ಕತ್ತರಿಸುತ್ತಿದ್ದರಿಂದ ಆಸ್ಪತ್ರೆಯಲ್ಲಿ ಈ ಮಗು ಹುಟ್ಟಿಲ್ಲ. ಸಿಸಿಟಿವಿ ಪರಿಶೀಲಿಸಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪಿಐ ಸಂತೋಷ್ ಕಶ್ಯಪ್ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.