ಚಾಮರಾಜನಗರ:ನೌಕರಿ ಸಿಗದಿದ್ದಕ್ಕೇ ಜಿಗುಪ್ಸೆಗೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ.
ಜ್ಯೋತಿಗೌಡನಪುರ ಗ್ರಾಮದ ಮನು(22) ಎಂಬಾತ ಮೃತ ಯುವಕ. ಈತ ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದು, ಯಾವುದೇ ನೌಕರಿ ಸಿಗದಿದ್ದರಿಂದ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ, ಕ್ರಿಮಿನಾಶಕ ಸೇವಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಸೇರಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾನೆ.