ಚಾಮರಾಜನಗರ:ಕಾವೇರಿ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೊಗೆನಕಲ್ ಜಲಪಾತಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
ಪ್ರವಾಸಿಗರೇ ಗಮನಿಸಿ: ಹೊಗೆನಕಲ್ ಜಲಪಾತಕ್ಕಿಲ್ಲ ಪ್ರವೇಶ! - ಕಾವೇರಿ ಹೊರಹರಿವು ಹೆಚ್ಚಾದ ಹಿನ್ನೆಲೆ
ಕಾವೇರಿ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೊಗೆನಕಲ್ ಜಲಪಾತಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿದ್ದು ,ಕಬಿನಿ ಜಲಾಶಯದಿಂದ ಹೆಚ್ಚಿನ ಹೊರ ಹರಿವು ಇರುವುದರಿಂದ ಹೊಗೆನಕಲ್ ಜಲಪಾತಕ್ಕೆ ಭಾರೀ ಪ್ರಮಾಣದ ನೀರು ಬರುತ್ತಿದೆ. ಅಪಾಯದ ಮಟ್ಟ ಮೀರಿ ನೀರು ಬರುವುದರಿಂದ ಪ್ರವಾಸಿಗರು ನದಿಗೆ ಇಳಿಯುವುದು ಹಾಗೂ ತೆಪ್ಪ ಸವಾರಿ ನಡೆಸುವುದನ್ನು ನಿರ್ಬಂಧಿಸಲಾಗಿದೆ.
ಜಲಪಾತದ ಸುತ್ತಮುತ್ತಲಿನ ಗ್ರಾಮಗಳಾದ ಜಮ್ಮಕುಟ್ಟಿ, ಆಲಂಬಾಂಡಿ ಮಾರಿಕೋಟೈ, ಗೋಫಿನಾಥಂ, ಆತೂರು, ಕೋಟೊಯೂರು, ವಿವಿಧ ಗ್ರಾಮಗಳಲ್ಲಿನ ಜನರು ನದಿ ದಡಕ್ಕೆ ತೆರಳದಂತೆ ಸೂಚಿಸಲಾಗಿದೆ.ಸ್ಥಳದಲ್ಲಿ ೫೦ ಕ್ಕೂ ಹೆಚ್ಚು ನುರಿತ ಈಜುಗಾರರನ್ನು ನಿಯೋಜಿಸಲಾಗಿದ್ದು ಯಾವುದೇ ಅವಘಡಗಳಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ.