ಗುಂಡ್ಲುಪೇಟೆ:ಪಟ್ಟಣದಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂ ಮುಂದೆ ಕೊರೊನಾ ಸೋಂಕು ತಪಾಸಣೆ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿನಿತ್ಯ ಹಣ ಡ್ರಾ ಮಾಡಲು ನೂರಾರು ಮಂದಿ ಆಗಮಿಸುತ್ತಾರೆ. ಅದರಲ್ಲಿ ಹೆಚ್ಚಿನ ಮಂದಿ ಮಾಸ್ಕ್ ಧರಿಸದೆ ವಹಿವಾಟು ನಡೆಸುತ್ತಾರೆ. ಹೀಗಿದ್ದರೂ ಸಹ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ವರ್ಗದವರು ಕ್ರಮ ವಹಿಸಿಲ್ಲ. ತಾಲೂಕಿನ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರೂ ಅದನ್ನು ತಡೆಗಟ್ಟಲು ಸರ್ಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿಯಮವನ್ನು ಗಾಳಿಗೆ ತೂರಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.