ಚಾಮರಾಜನಗರ: ಕೋವಿಡ್ ನಿಯಮವನ್ನು ಪದೇಪದೆ ಉಲ್ಲಂಘಿಸುತ್ತಿದ್ದ ಜಿಲ್ಲೆಯ 8 ಮಂದಿ ಖಾಸಗಿ ವೈದ್ಯರಿಗೆ ಚಾಮರಾಜನಗರ ಡಿಸಿ ನೋಟಿಸ್ ನೀಡಿ, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಚಾಮರಾಜನಗರ: ಕೋವಿಡ್ ನಿಯಮ ಉಲ್ಲಂಘಿಸಿದ 8 ಖಾಸಗಿ ವೈದ್ಯರಿಗೆ ಡಿಸಿ ನೋಟಿಸ್ - ಚಾಮರಾಜನಗರ ಖಾಸಗಿ ವೈದ್ಯರು
ಚಾಮರಾಜನಗರದಲ್ಲಿ ಪದೇ ಪದೇ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಖಾಸಗಿ ವೈದ್ಯರಿಗೆ ನೋಟಿಸ್ ನೀಡಿದ ಜಿಲ್ಲಾಧಿಕಾರಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
8 ಮಂದಿ ವೈದ್ಯರು ಸಹ ಯಳಂದೂರು ಪಟ್ಟಣದವರಾಗಿದ್ದು ಜನಸಂದಣಿ ಸೇರಿಸಿ ಸಾಮಾಜಿಕ ಅಂತರ ನಿಯಮವನ್ನು ಉಲ್ಲಂಘಿಸುತ್ತಿದ್ದರು ಎನ್ನಲಾಗ್ತಿದೆ. ಈ ವೈದ್ಯರಿಗೆ ನೋಟಿಸ್ ನೀಡಿ ಉತ್ತರ ಕೇಳಿದ್ದು, ಇದೇ ರೀತಿ ಘಟನೆ ಮತ್ತೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ ಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ನೀಡಿ ಬಳಿಕ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ನಂತರ ಕೋವಿಡ್ ಆಸ್ಪತ್ರೆಗೆ ಕಳುಹಿಸುತ್ತಿದ್ದ ಹನೂರಿನ ಎರಡು ಖಾಸಗಿ ಕ್ಲಿನಿಕ್ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ನೀಡುವ ಜೊತೆಗೆ ಕೋವಿಡ್ ಟೆಸ್ಟ್ ಕೂಡ ಮಾಡಿಸಿ ಎಂದು ತಾಕೀತು ಮಾಡಿದ್ದಾರೆ.