ಚಾಮರಾಜನಗರ:ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಗಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಇದೇ 25-26ಕ್ಕೆ ಮಾದಪ್ಪನ ಬೆಟ್ಟಕ್ಕೆ ಸಿಎಂ: 200 ಮಂದಿಗಷ್ಟೇ ಆಹ್ವಾನ - ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ
ಸಿಎಂ ಬಿ.ಎಸ್.ಯಡಿಯೂರಪ್ಪ ನ. 25 ಮತ್ತು 26 ರಂದು ಶ್ರೀ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುವರು. ಜೊತೆಗೆ, ಒಟ್ಟು 9 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ. 25 ಮತ್ತು 26 ರಂದು ಶ್ರೀ ಕ್ಷೇತ್ರದ ವ್ಯಾಪ್ತಿಯಲ್ಲಿ 1,384 ಲಕ್ಷ ರೂ. ವೆಚ್ಚದ 8 ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುವರು. ಜೊತೆಗೆ, ಒಟ್ಟು 10993 ಲಕ್ಷ ರೂ. ವೆಚ್ಚದ 9 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುತ್ತೂರು ಶ್ರೀಗಳು, ಸಾಲೂರು ಮಠದ ಶ್ರೀಗಳು ಸಾನ್ನಿಧ್ಯ ವಹಿಸುವರು ಎಂದು ಅವರು ಹೇಳಿದರು.
ಕೋವಿಡ್-19 ತಡೆಗಟ್ಟುವ ಉದ್ದೇಶದಿಂದ ಕಾರ್ಯಕ್ರಮ ನಡೆಯುವ ರಂಗಮಂದಿರಕ್ಕೆ 200 ಮಂದಿಗಷ್ಟೇ ಆಹ್ವಾನ ನೀಡಲಿದ್ದು, ಸಾಮಾಜಿಕ ಅಂತರ ಪಾಲನೆಯಾಗಲಿದೆ ಎಂದರು.