ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ: ತಗ್ಗದ ಸಾವಿನ ಪ್ರಮಾಣ - ಚಾಮರಾಜನಗರ ಕೊರೊನಾ ಸುದ್ದಿ

ಚಾಮರಾಜನಗರದಲ್ಲಿ ಸಕ್ರಿಯ ಪ್ರಕರಣಗಳ‌ ಸಂಖ್ಯೆ 3,769ಕ್ಕೆ ಇಳಿದಿದ್ದು 48 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2,584 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 4,459 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

  number of Corona infected decrease in Chamarajanagar
number of Corona infected decrease in Chamarajanagar

By

Published : May 18, 2021, 10:51 PM IST

ಚಾಮರಾಜನಗರ: ಸತತ ಮೂರನೇ ದಿನವೂ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಜಿಲ್ಲೆಯಲ್ಲಿ ಹೆಚ್ಚಿದ್ದು, 343 ಮಂದಿ ಹೊಸ ಕೋವಿಡ್ ಕೇಸ್ ಪತ್ತೆಯಾದರೇ 359 ಮಂದಿ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ‌ ಸಂಖ್ಯೆ 3769ಕ್ಕೆ ಇಳಿದಿದ್ದು 48 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2,584 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 4,459 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಇಂದು ಕೇವಲ 848 ಮಂದಿಗಷ್ಟೇ ಕೊರೊನಾ ಸಂಖ್ಯೆ ನಡೆಸಲಾಗಿದೆ.

8 ಮಂದಿ ಸಾವು:

ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದರೂ ಸಾವಿನ ಸರಣಿ ಮಾತ್ರ ಮುಂದುವರೆದಿದೆ. ಇಂದು 8 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 316ಕ್ಕೆ ಏರಿಕೆಯಾಗಿದೆ. ರಾಜ್ಯದ ಸರಾಸರಿ ಮರಣ ಪ್ರಮಾಣಕ್ಕಿಂತ ಜಿಲ್ಲೆಯದು ಹೆಚ್ಚಿದೆ.

ABOUT THE AUTHOR

...view details