ಕರ್ನಾಟಕ

karnataka

ETV Bharat / state

ಚಾಮರಾಜನಗರ ಟ್ಯಾಂಕ್ ಸ್ವಚ್ಛಗೊಳಿಸಿದ ಪ್ರಕರಣ: ಒಬ್ಬನ ಬಂಧನ - ಈಟಿವಿ ಭಾರತ ಕನ್ನಡ

ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್ ಸ್ಬಚ್ಛ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

one-arrested-in-chamarajnagar-dalit-woman-case-water-drink-case
ಚಾಮರಾಜನಗರ ಟ್ಯಾಂಕ್ ಸ್ವಚ್ಛಗೊಳಿಸಿದ ಪ್ರಕರಣ : ಓರ್ವನ ಬಂಧನ

By

Published : Nov 22, 2022, 9:20 PM IST

ಚಾಮರಾಜನಗರ : ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್ ಸ್ಬಚ್ಛ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೆಗ್ಗೋಠಾರ ಗ್ರಾಮದ ಮಹದೇವಪ್ಪ ಎಂದು ಗುರುತಿಸಲಾಗಿದೆ.‌

ಪ್ರಕರಣ ಸಂಬಂಧ ತಹಶೀಲ್ದಾರ್ ನಡೆಸಿದ ಸಭೆಯಲ್ಲಿ ಅದೇ ಗ್ರಾಮದ ಗಿರಿಯಪ್ಪ ಎಂಬವರು ದೂರು ನೀಡಿದ ಆಧಾರದ ಮೇರೆಗೆ ಮಹಾದೇವಪ್ಪ ಅವರನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಇದುವರೆಗೆ ಮಹಿಳೆ ದೂರು ಕೊಟ್ಟಿಲ್ಲ. ಗ್ರಾಮದವರು ಕೊಟ್ಟ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಎಎಸ್​ಪಿ ಈಗಾಗಲೇ ಗ್ರಾಮದಲ್ಲಿ ಎರಡು ಬಾರಿ ಶಾಂತಿ ಸಭೆ ನಡೆಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ತಿಳಿಸಿದರು.

ಘಟನೆ ಹಿನ್ನೆಲೆ: ಕಳೆದ ಶುಕ್ರವಾರ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದ್ದ ವಿವಾಹ ಕಾರ್ಯಕ್ರಮಕ್ಕೆ ಹೆಚ್.ಡಿ.ಕೋಟೆ ತಾಲೂಕಿನ‌ ಸರಗೂರು ಗ್ರಾಮಸ್ಥರು ಬಂದಿದ್ದರು. ಮಧ್ಯಾಹ್ನದ ಊಟ ಮುಗಿಸಿ ಬಸ್‌ಗೆ ಹೋಗುವ ಸಂದರ್ಭದಲ್ಲಿ ಮಹಿಳೆಯೊಬ್ಬರು ಗ್ರಾಮದ ಹಳೆ ಮಾರಿಗುಡಿ ಬಳಿ ಸವರ್ಣೀಯರ ಬೀದಿಯಲ್ಲಿನ ತೊಂಬೆಯ ನಲ್ಲಿಯಲ್ಲಿ ನೀರು ಕುಡಿದಿದ್ದಾರೆ. ಅದೇ ಬೀದಿಯವರು ಯಾರೋ ಇದನ್ನು ನೋಡಿ ಮಹಿಳೆ ದಲಿತ ಸಮುದಾಯದವಳು ಎಂದು ಗೊತ್ತಾಗುತ್ತಿದ್ದಂತೆ ನೀರನ್ನು ಖಾಲಿ ಮಾಡಿಸಿ ಗಂಜಲ ಹಾಕಿ ತೊಳೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ಟ್ಯಾಂಕ್ ಸ್ವಚ್ಛ ಪ್ರಕರಣ: ಗ್ರಾಮದ ಎಲ್ಲಾ‌ ತೊಂಬೆಗಳಲ್ಲಿ ದಲಿತ ಯುವಕರಿಗೆ ನೀರು ಕುಡಿಸಿದ ತಹಶೀಲ್ದಾರ್​

ABOUT THE AUTHOR

...view details