ಕರ್ನಾಟಕ

karnataka

ETV Bharat / state

ಕೋಟ್ಯಧಿಪತಿಯಾಗಿಯೇ ಮುಂದುವರೆದ ಉಘೇ ಮಾದಪ್ಪ: 28 ದಿನಕ್ಕೆ ಮಹದೇಶ್ವರನ ಹುಂಡಿಯಲ್ಲಿ 1.67 ಕೋಟಿ ಸಂಗ್ರಹ - ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ

ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದ್ದು, 1.67 ಕೋಟಿ ರೂ. ಸಂಗ್ರಹವಾಗಿದೆ.

Chamarajanagar male mahadeshwara temple
ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ

By

Published : Nov 27, 2021, 12:01 PM IST

ಚಾಮರಾಜನಗರ: ರಾಜ್ಯದ ಪ್ರಮುಖ ಮತ್ತು ಹೆಚ್ಚು ಆದಾಯ ಹೊಂದಿರುವ ದೇವಾಲಯಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೋಟ್ಯಂತರ ರೂ ನಗದು, ಕೆ.ಜಿಗಟ್ಟಲೇ ಬೆಳ್ಳಿ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ

ಶುಕ್ರವಾರ ಬೆಳಗಿನಿಂದ ತಡರಾತ್ರಿವರೆಗೂ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೇವಲ 28 ದಿನಗಳಲ್ಲಿ 1,67,07,270 ಸಂಗ್ರಹವಾಗಿದೆ. ಇದರಲ್ಲಿ ನಾಣ್ಯಗಳೇ 12 ಲಕ್ಷದಷ್ಟಿದೆ‌. ಇದರೊಂದಿಗೆ 55 ಗ್ರಾಂ ಚಿನ್ನ ಹಾಗೂ ಬೆಳ್ಳಿಯನ್ನು ಏಳುಮಲೆ ಒಡೆಯನಿಗೆ ಭಕ್ತರು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದಲ್ಲಿ ವಿವಿಧ ಸೇವೆ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಕಾರ್ತಿಕ ಮಾಸದಲ್ಲಿ ವಾರಾಂತ್ಯ ಮತ್ತು ಸೋಮವಾರದಂದು ಭಕ್ತರ ದಂಡೇ ಹರಿದು ಬಂದು ಕೇವಲ ಚಿನ್ನದ ರಥ, ಲಡ್ಡು ಮಾರಾಟ ಹಾಗೂ ಇತರ ಸೇವೆಗಳಿಂದಲೇ ದಿನವೊಂದಕ್ಕೆ ಸರಾಸರಿ 19 ಲಕ್ಷಕ್ಕೂ ಹೆಚ್ಚು ಆದಾಯ ಬರುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಉತ್ತರ ಕನ್ನಡದಲ್ಲಿ ಹೆಚ್ಚುತ್ತಿವೆ ಮಹಿಳೆಯರು, ಯುವತಿಯರ ನಾಪತ್ತೆ ಪ್ರಕರಣಗಳು

ABOUT THE AUTHOR

...view details