ಚಾಮರಾಜನಗರ: ಪ್ಯಾಸೆಂಜರ್ ಆಟೋ ಪಲ್ಟಿಯಾಗಿ ಪ್ರಯಾಣಿಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ. ಬನ್ನಿತಾಳಪುತದ ರಾಜಾಚಾರಿ ಮೃತಪಟ್ಟವರಾಗಿದ್ದಾರೆ ಎನ್ನಲಾಗಿದ್ದು, 4 ಮಂದಿ ಗಾಯಗೊಂಡಿದ್ದಾರೆ.
ಆಟೋ ಪಲ್ಟಿ: ಓರ್ವ ಸಾವು, ನಾಲ್ವರಿಗೆ ಗಾಯ
ಪ್ಯಾಸೆಂಜರ್ ಆಟೋ ಪಲ್ಟಿಯಾಗಿ ಪ್ರಯಾಣಿಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.
ಪ್ಯಾಸೆಂಜರ್ ಆಟೋ ಪಲ್ಟಿ
ಗುಂಡ್ಲುಪೇಟೆಗೆ ತೆರಳುತ್ತಿದ್ದ ಪ್ಯಾಸೆಂಜರ್ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕನ ಅತಿಯಾದ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಟೋ ಪಲ್ಟಿಯಾಗುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನು ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.