ಚಾಮರಾಜನಗರ: ಕಳೆದ ನಾಲ್ಕು ದಿನಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಜರುಗಿದ್ದ ಕಾರ್ಯಕ್ರಮಗಳ ಮಾಹಿತಿಯನ್ನು ಸಿಎಂ ಬಿಎಸ್ವೈ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳುವ ವೇಳೆ ಆದ ಎಡವಟ್ಟಿಗೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ.
ಸಂವಿಧಾನ ದಿವಸ್ ಆಚರಣೆ ಕುರಿತು ಸಿಎಂ ಟ್ವಟರ್ನಲ್ಲಿ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅವರ ಹೆಸರನ್ನು ಮಾತ್ರ ಹಾಕಿ ಹನೂರು ಶಾಸಕ ಆರ್. ನರೇಂದ್ರ, ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರ ಹೆಸರನ್ನು ಕೈ ಬಿಟ್ಟಿರುವುದು ಕೈ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಟೀಕೆಗಳ ಮಳೆಯನ್ನೇ ಸುರಿಸುತ್ತಿದ್ದಾರೆ.