ಚಾಮರಾಜನಗರ :ಕ್ಷುಲ್ಲಕ ವಿಚಾರಕ್ಕೆ ಪತ್ನಿಗೆ ಮುಚ್ಚಿನಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದ ಪತಿಯೂ ಸಹ ಇದೀಗ ನೇಣಿಗೆ ಶರಣಾಗಿರುವ ಘಟನೆ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ. ಇದರಿಂದಾಗಿ ಕೇವಲ ಎರಡು ದಿನಗಳಲ್ಲೇ ಮೂವರು ಮಕ್ಕಳು ತಮ್ಮ ತಂದೆ ಹಾಗೂ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.
ಸುಶೀಲಾ ಮತ್ತು ನಾಗರಾಜು ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ. ಜೂನ್ 9ರ ಸಂಜೆ ದಂಪತಿ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಪತ್ನಿ ಸುಶೀಲಾಗೆ ನಾಗರಾಜು ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸುಶೀಲಾರನ್ನು ಸಂಬಂಧಿಗಳುಆಸ್ಪತ್ರೆಗೆ ಸೇರಿಸಿರಾದರೂ, ಚಿಕಿತ್ಸೆ ಫಲಕಾರಿಯಾಗದೇ ಅಂದೇ ಮೃತಪಟ್ಟಿರುತ್ತಾರೆ.