ಚಾಮರಾಜನಗರ: ಎಂಟು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು ದಂಡಸಮೇತ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿತು. ಯಳಂದೂರು ಪಟ್ಟಣ ನಿವಾಸಿ ಮಹೇಶ್(38) ಶಿಕ್ಷೆಗೊಳಗಾದ ವ್ಯಕ್ತಿ.
ಮಕ್ಕಳ ಸ್ನೇಹಿ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎ.ಸಿ.ನಿಶಾರಾಣಿ ಈ ಆದೇಶ ಮಾಡಿದರು. ಅಪರಾಧಿಗೆ ಶಿಕ್ಷೆಯೊಂದಿಗೆ 15 ಸಾವಿರ ರೂ. ದಂಡ ವಿಧಿಸಲಾಗಿದೆ. ಕಾನೂನು ಸೇವಾ ಪ್ರಾಧಿಕಾರವು ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ಕೊಡುವಂತೆ ಸೂಚಿಸಿದೆ.