ಕರ್ನಾಟಕ

karnataka

ETV Bharat / state

ಪ್ರಧಾನಿ ಮೋದಿ ಬಂಡೀಪುರ ಭೇಟಿ: 4 ದಿನ ಸಫಾರಿ ಇರಲ್ಲ, ರೆಸಾರ್ಟ್, ಹೋಂಸ್ಟೇಗೆ ನಿರ್ಬಂಧ - ಸಾರ್ವಜನಿಕರಿಗೆ 4 ದಿನ ಸಫಾರಿ ನಿರ್ಬಂಧ

ಬಂಡೀಪುರ ಹುಲಿ ಸಂರಕ್ಷಿತಾ ಯೋಜನೆಗೆ 50 ವರ್ಷ ತುಂಬಿದ್ದು ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

Etv Bharat
Etv Bharat

By

Published : Apr 5, 2023, 4:10 PM IST

ಚಾಮರಾಜನಗರ : ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಭೇಟಿ ನೀಡಲಿದ್ದು, ವನ್ಯಜೀವಿ ಸಫಾರಿ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ‌. ಬಿಗಿ ಭದ್ರತೆ, ಪೂರ್ವ ಸಿದ್ಧತೆ ಕೈಗೊಳ್ಳುವ ಉದ್ದೇಶದಿಂದ ಏ. 5 ರಿಂದ 9 ರವರೆಗೆ ವನ್ಯಜೀವಿ ಸಫಾರಿಯನ್ನು ನಿರ್ಬಂಧಿಸಲಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ರಾಜ್ಯದಲ್ಲೇ ಅತ್ಯಧಿಕ ಹುಲಿಗಳಿರುವ ರಕ್ಷಿತಾರಣ್ಯವಾಗಿದೆ. ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಸಫಾರಿ ನಡೆಯುತ್ತಿದೆ. ಬಂಡೀಪುರ ವ್ಯಾಪ್ತಿಯಲ್ಲಿ ಬರುವ ರೆಸಾರ್ಟ್, ಹೋಂ ಸ್ಟೇ, ಲಾಡ್ಜ್‌ಗಳಲ್ಲಿ ಜನರ ವಾಸ್ತವ್ಯ, ತಂಗುವಿಕೆ, ಭೇಟಿಯನ್ನೂ ಈ ಅವಧಿಯಲ್ಲಿ ನಿಷೇಧಿಸಲಾಗಿದೆ.

ಇದನ್ನೂ ಓದಿ :ಏಪ್ರಿಲ್ 8 ಮತ್ತು 9 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ಮೋದಿ ಮೈಸೂರು ಪ್ರವಾಸದ ವಿವರ:ಮೋದಿ ಅವರು ಏಪ್ರಿಲ್ 8 ಮತ್ತು 9 ರಂದು ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ. ಏ. 8 ರಂದು ರಾತ್ರಿ 8:30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಇಲ್ಲಿನ ರ‍್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ರಾತ್ರಿ ವಾಸ್ತವ್ಯ ಹೂಡುವರು. ಏಪ್ರಿಲ್ 9ರ ಬೆಳಗ್ಗೆ 6:30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬಂಡೀಪುರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ 9.30ರವರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬಂಡೀಪುರದಿಂದ ತಮಿಳುನಾಡಿನ ನೀಲಗಿರಿಗೆ ಪ್ರಯಾಣ ಬೆಳೆಸುವರು. ನೀಲಗಿರಿಯಲ್ಲಿನ ಆನೆ ಶಿಬಿರಕ್ಕೆ ಮೋದಿ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ನೀಲಗಿರಿಯಿಂದ ಮೈಸೂರಿನ ಕೆಎಸ್ಒಯುನ ತಾತ್ಕಾಲಿಕ ಹೆಲಿಪ್ಯಾಡ್‌ಗೆ ಆಗಮಿಸುವರು. ಮಧ್ಯಾಹ್ನ 12.30ಕ್ಕೆ ಕೆಎಸ್ಒಯುನ ಘಟಿಕೋತ್ಸವ ಭವನದಲ್ಲಿ ನಡೆಯುವ ಬಂಡೀಪುರ ಹುಲಿ ಯೋಜನೆಯ 50 ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆ ನಂತರ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್​ ಆಗಲಿದ್ದಾರೆ.

ಇದನ್ನೂ ಓದಿ:ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಅರಣ್ಯ ಇಲಾಖೆಯಿಂದ ಸಕಲ ತಯಾರಿ

ABOUT THE AUTHOR

...view details