ಕರ್ನಾಟಕ

karnataka

ETV Bharat / state

ಚಾಮರಾಜನಗರ, ಕೊಳ್ಳೇಗಾಲದಲ್ಲಿ ಪೊಲೀಸರ ಪಥಸಂಚಲನ - police parade in chamarajanagara and kollegala city

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಚಾಮರಾಜನಗರ, ಕೊಳ್ಳೇಗಾಲದಲ್ಲಿ ಪಥಸಂಚಲನ ನಡೆಸಿದ್ದಾರೆ.

ಅಯೋಧ್ಯೆ ತೀರ್ಪು ಹಿನ್ನೆಲೆ: ಚಾಮರಾಜನಗರ,ಕೊಳ್ಳೇಗಾಲದಲ್ಲಿ ಪೊಲೀಸರ ಪಥ ಸಂಚಲನ

By

Published : Nov 9, 2019, 12:08 PM IST

ಚಾಮರಾಜನಗರ: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಚಾಮರಾಜನಗರ, ಕೊಳ್ಳೇಗಾಲದಲ್ಲಿ ಪಥಸಂಚಲನ ನಡೆಸಿದ್ದಾರೆ.

ಅಯೋಧ್ಯೆ ತೀರ್ಪು ಪ್ರಕಟ: ಚಾಮರಾಜನಗರ, ಕೊಳ್ಳೇಗಾಲದಲ್ಲಿ ಪೊಲೀಸರ ಪಥಸಂಚಲನ

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಂದಿರ, ಚರ್ಚ್​ ಮತ್ತು ಮಸೀದಿಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪುಂಡರ ಮೇಲೆ ಈಗಾಗಲೇ ಪೊಲೀಸ್ ಇಲಾಖೆ ಕಣ್ಣಿಟ್ಟಿದ್ದು, ಗೂಂಡಾಗಳಿಗೆ ಖಡಕ್ ಎಚ್ಚರಿಕೆ ನೀಡಿಡಲಾಗಿದೆ. ಕೋಮು ಸಾಮರಸ್ಯ ಕದಡುವ ಮನಸ್ಸಿನ 25 ಮಂದಿ ಗೂಂಡಾಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಎಚ್.ಡಿ.ಆನಂದಕುಮಾರ್ ತಿಳಿಸಿದ್ದಾರೆ.

ಕೊಳ್ಳೇಗಾಲದಲ್ಲಿ ಡಿವೈಎಸ್ಪಿ ನವೀನ್ ಕುಮಾರ್, ಗುಂಡ್ಲುಪೇಟೆಯಲ್ಲಿ ಸಿಪಿಐ ಮಹಾದೇವಸ್ವಾಮಿ, ನಗರದಲ್ಲಿ ಎಸ್ಪಿ ನೇತೃತ್ವದಲ್ಲಿ ಡಿವೈಎಸ್ಪಿ ಭದ್ರತೆ ಕೈಗೊಂಡಿದ್ದಾರೆ.

ABOUT THE AUTHOR

...view details