ಗುಂಡ್ಲುಪೇಟೆ:ತಾಲ್ಲೂಕಿನ ಭೀಮನಬೀಡು ಗ್ರಾಮದ ಹೊರ ವಲಯದಲ್ಲಿ ಕಾಡಿಗೆ ಬೇಟೆಯಾಡಲು ತೆರಳುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳಿಂದ ಅಕ್ರಮ ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ.
ಬೇಟೆಗಾಗಿ ಕಾಡಿಗೆ ತೆರಳುತ್ತಿದ್ದ ವೇಳೆ ಪೊಲೀಸ್ ದಾಳಿ, ಅಕ್ರಮ ನಾಡ ಬಂದೂಕು ವಶ - A gun seized
ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ ಪೆಕ್ಟರ್ ಲಕ್ಷ್ಮಿಕಾಂತ್, ಸಬ್ ಇನ್ಸ್ ಪೆಕ್ಟರ್ ರಾಜೇಂದ್ರ, ಐಎಸ್ಟಿ ಇನ್ಸ್ ಪೆಕ್ಟರ್ ಚೆನ್ನನಾಯಕ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ನಾಡ ಬಂದೂಕು ವಶಕ್ಕೆ ಪಡೆದಿದ್ದಾರೆ.
ಅಕ್ರಮ ನಾಡ ಬಂದೂಕು ವಶ
ಈ ವೇಳೆ ಇಬ್ಬರು ಆರೋಪಿಗಳು ತಪ್ಪಿಸಿಕೊಂಡು ಓಡಿದ್ದು, ತಲೆಮರೆಸಿಕೊಂಡಿದ್ದಾರೆ. ಭೀಮನಬೀಡು ಗ್ರಾಮದ ಕುಳ್ಳ ಎಂದು ಒಬ್ಬಾತನನ್ನು ಕರೆಯುತ್ತಾರೆ ಎನ್ನಲಾಗಿದೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕ ಬಲೆ ಬೀಸಿದ್ದಾರೆ. ದಾಳಿಯಲ್ಲಿ ಪಟ್ಟಣ ಠಾಣೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.