ಚಾಮರಾಜನಗರ:ನಗರದಲ್ಲಿಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಇಬ್ಬರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಕಪಿಲ್ ಹಾಗು ಕಾರ್ಯದರ್ಶಿ ಶೋಯೆಬ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಇಂದು ಬೆಳಗಿನಜಾವ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದು ಚಾಮರಾಜನಗರ ತಹಶಿಲ್ದಾರ್ ನಿವಾಸಕ್ಕೆ ಹಾಜರುಪಡಿಸಿದ್ದಾರೆ. ಎನ್ಐಎ ಕೊಟ್ಟ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ ಎನ್ನಲಾಗ್ತಿದೆ.