ಕರ್ನಾಟಕ

karnataka

ETV Bharat / state

ಬಾಲ್ಯ ವಿವಾಹಕ್ಕೆ ಸಿದ್ಧತೆ: ಅಧಿಕಾರಿಗಳಿಗೆ ಬಾಲಕಿ ಹೇಳಿದ್ದು ಹೀಗೆ! - ಗುಂಡ್ಲುಪೇಟೆ ಚಾಮರಾಜನಗರ ಲೆಟೆಸ್ಟ್ ನ್ಯೂಸ್

ರಾಘವಾಪುರ ಗ್ರಾಮದಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಲಕಿ, ತನಗೆ 18 ವರ್ಷ ತುಂಬಿದ ಬಳಿಕ ಮದುವೆಯಾಗುವುದಾಗಿ ಅಧಿಕಾರಿಗಳ‌ ಬಳಿ ಹೇಳಿಕೆ ನೀಡಿದ್ದಾಳೆ.

Child marriage issue
Child marriage issue

By

Published : Jun 4, 2020, 8:16 PM IST

ಗುಂಡ್ಲುಪೇಟೆ: ತಾಲೂಕಿನ ರಾಘವಾಪುರ ಗ್ರಾಮದಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಮಕ್ಕಳ ಸಹಾಯ ವಾಣಿ ಸದಸ್ಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೆಲುವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬಾಲಕಿ ಮಾತನಾಡಿ, ನನ್ನನ್ನು ಮದುವೆ ಆಗಲು ಕೇಳಿದ್ದರು. ಆದ್ರೆ ಸದ್ಯಕ್ಕೆ ಮದುವೆ ರದ್ದಾಗಿದೆ. ನನಗೆ 18 ವರ್ಷ ತುಂಬಿದ ಬಳಿಕ ಮದುವೆಯಾಗುತ್ತೇನೆ. ಒಂದು ವೇಳೆ ಮನೆಯವರು ಮದುವೆಗೆ ಸಿದ್ಧತೆ ಮಾಡಿದರೆ 1098 ಸಹಾಯವಾಣಿ ನಂಬರ್​ಗೆ ಕರೆ ಮಾಡಿ ತಿಳಿಸುವುದಾಗಿ ಹೇಳಿದ್ದಾಳೆ. ಜೊತೆಗೆ ಪೋಷಕರು ಸಹ 18 ವರ್ಷ ತುಂಬಿದ ಬಳಿಕ ಮದುವೆ ಮಾಡುವುದಾಗಿ ಅಧಿಕಾರಿಗಳ ಮುಂದೆ ಹೇಳಿದ್ದಾರೆ.

ABOUT THE AUTHOR

...view details