ಗುಂಡ್ಲುಪೇಟೆ (ಚಾಮರಾಜನಗರ):ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೊರೊನಾಗೆ ಬಲಿಯಾಗಿದ್ದಾರೆ. ಮೃತ ಶಿಕ್ಷಕ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಗುಂಡ್ಲುಪೇಟೆ: ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೊರೊನಾಗೆ ಬಲಿ - A government school teacher
ಕಳೆದ ವಾರ ಜ್ವರ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಳೆದ ವಾರ ಜ್ವರ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಳೆದ ವಾರ ಜ್ವರದಿಂದ ಬಳಲುತ್ತಿದ್ದ ಶಿಕ್ಷಕ ಗುಂಡ್ಲುಪೇಟೆ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ ವೈದ್ಯರು ಮೈಸೂರಿಗೆ ರವಾನಿಸಿದ್ದರು. ಕಾರಣಾಂತರದಿಂದ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದುಕೊಳ್ಳುವುದಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಕೆಲ ದಿನಗಳ ನಂತರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮೈಸೂರು ಆಸ್ಪತ್ರೆಗೆ ಕರೆದೋಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.