ಚಾಮರಾಜನಗರ:ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ವಿರುದ್ಧ ಚಾಮರಾಜನಗರದಲ್ಲಿ ಸಾವಿರಾರು ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರತಿಭಟನೆ - ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ವಿರುದ್ಧ ಚಾಮರಾಜನಗರದಲ್ಲಿ ಸಾವಿರಾರು ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದರು.

ಚಾಮರಾಜನಗರದಲ್ಲಿ ಪ್ರತಿಭಟನೆ
ಚಾಮರಾಜನಗರದಲ್ಲಿ ಪ್ರತಿಭಟನೆ
ಪ್ರವಾಸಿ ಮಂದಿರದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಲಾರಿ ಸ್ಟಾಂಡ್ ಬಳಿ ಸಾವಿರಾರು ಮಹಿಳೆಯರು, ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ಒಂದು ಗಂಟೆಗೂ ಹೆಚ್ಚು ಕಾಲ ತಡೆದು ಧರಣಿ ನಡೆಸಿದರು.
ಪೊಲೀಸ್ ಇಲಾಖೆ ಅನುಮತಿ ನಿರಾಕರಣೆ ನಡುವೆಯೂ ಮಹಿಳೆಯರು ಭಾರೀ ಪ್ರತಿಭಟನೆ ನಡೆಸಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದರು. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿಯನ್ನು ಹಿಂಪಡೆಯುವವರೆಗೂ ನಿರಂತರವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.