ಚಾಮರಾಜನಗರ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿರುವ ಬಜೆಟ್ನಲ್ಲಿ ಚಾಮರಾಜನಗರಕ್ಕೆ ಪ್ರಾತಿನಿಧ್ಯ ನೀಡಿಲ್ಲವೆಂದು ಆರೋಪಿಸಿ ಕನ್ನಡಪರ ಹೋರಾಟಗಾರರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಬಜೆಟ್ನಲ್ಲಿ ಚಾಮರಾಜನಗರ ಕಡೆಗಣನೆ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ - chamrajanagara news
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿರುವ ಬಜೆಟ್ನಲ್ಲಿ ಚಾಮರಾಜನಗರಕ್ಕೆ ಪ್ರಾತಿನಿಧ್ಯ ನೀಡಿಲ್ಲವೆಂದು ಆರೋಪಿಸಿ ಕನ್ನಡಪರ ಹೋರಾಟಗಾರರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಬಜೆಟ್ನಲ್ಲಿ ಚಾಮರಾಜನಗರ ಕಡೆಗಣನೆ ಖಂಡಿಸಿ ಕನ್ನಡಪರ ಹೋರಾಟಗಾರರಿಂದ ಅರೆಬೆತ್ತಲೆ ಪ್ರತಿಭಟನೆ!
ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ತಮ್ಮ ಶರ್ಟ್ ಕಳಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಬಜೆಟ್ನಲ್ಲಿ ವಿಶೇಷವಾಗಿ ಒಂದೂ ರೂಪಾಯಿಯನ್ನೂ ಚಾಮರಾಜನಗರದ ಹೆಸರು ಹೇಳಿ ನೀಡಿಲ್ಲ ಎಂದು ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಅಲ್ಲದೇ, ಜಿಲ್ಲೆಗೆ ಅನುದಾನ ತರುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವಿಫಲರಾಗಿದ್ದಾರೆ. ರಾಜ್ಯದ ಬಜೆಟ್ನಲ್ಲಿ ಚಾಮರಾಜನಗರಕ್ಕೆ ತಾರತಮ್ಯ ಎಸಗಿದ್ದಾರೆಂದು ಆಕ್ರೋಶ ಹೊರಹಾಕಿದರು.