ಚಾಮರಾಜನಗರ:ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸೋಣ ಎಂಬ ಘೋಷಣೆಯೊಂದಿಗೆ ಇಂದು ಜಿಲ್ಲಾದ್ಯಂತ ಪೊಲಿಯೋ ಲಸಿಕೆ ಅಭಿಯಾನ ಆರಂಭವಾಗಿದೆ.
ಗಡಿಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ... 67 ಸಾವಿರ ಮಕ್ಕಳಿಗೆ ಲಸಿಕೆ ಗುರಿ! - Pulse polio campaign
ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸೋಣ ಎಂಬ ಘೋಷಣೆಯೊಂದಿಗೆ ಇಂದು ಚಾಮರಾಜನಗರ ಜಿಲ್ಲಾದ್ಯಂತ ಪೊಲಿಯೋ ಲಸಿಕೆ ಅಭಿಯಾನ ಆರಂಭವಾಗಿದೆ.
ಚಾಮರಾಜನಗರದಲ್ಲಿ ಪಲ್ಸ್ ಪೋಲಿಯೋ ಅಭಿಯಾನ
ಜ. 22 ರವರೆಗೆ ಈ ಅಭಿಯಾನ ನಡೆಯಲಿದ್ದು, 619 ಬೂತ್ಗಳನ್ನು ತೆರೆಯಲಾಗಿದೆ. 2470 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದು, 67,504 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 10 ಮೊಬೈಲ್ ಯೂನಿಟ್ಗಳ ಮೂಲಕ ಗುರುತಿಸಿರುವ 20 ಸಾರ್ವಜನಿಕ ಪ್ರದೇಶಗಳು, ದೇವಾಲಯಗಳು, ಪ್ರವಾಸಿ ಕೇಂದ್ರಗಳಲ್ಲಿ ಲಸಿಕೆ ಹಾಕಲಿದ್ದಾರೆ ಎಂದು ಡಿಹೆಚ್ಒ ಡಾ.ಎಂ.ಸಿ.ರವಿ ತಿಳಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳು, ತಾಲೂಕು ಆಸ್ಪತ್ರೆ, ನಗರ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತಿದೆ.