ಕರ್ನಾಟಕ

karnataka

ETV Bharat / state

ನಿವೇಶನ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ: ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ - ಕೊಳ್ಳೇಗಾಲ ಕ್ರೈಮ್​ ಲೇಟೆಸ್ಟ್ ನ್ಯೂಸ್

ಕೊಳ್ಳೇಗಾಲದ ಸತ್ತೇಗಾಲ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ನಿವೇಶನ ವಿಚಾರವಾಗಿ ಮಾರಾಮಾರಿ ನಡೆದಿದೆ. ಈ ವೇಳೆ, ಇಬ್ಬರು ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದೆ.

ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ
two people injured inccident

By

Published : Jan 20, 2021, 10:36 AM IST

Updated : Jan 20, 2021, 11:59 AM IST

ಕೊಳ್ಳೇಗಾಲ:ನಿವೇಶನ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ಸತ್ತೇಗಾಲ ಗ್ರಾಮದಲ್ಲಿ ನಡೆದಿದೆ.

ನಿವೇಶನ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ

ಸತ್ತೇಗಾಲದ ಗ್ರಾಮದ ಶಿವಮೂರ್ತಿ, ಮಹೇಶ್ ಹಲ್ಲೆಗೊಳಗಾದವರು. ಶೃಂಗಾರ್, ನಾರಾಯಣಿ, ಪುಟ್ಟಿ ಹಲ್ಲೆ ಮಾಡಿರುವ ಆರೋಪಿಗಳಾಗಿದ್ದಾರೆ.

ಘಟನೆ ಹಿನ್ನೆಲೆ:

ಇಂದು ಬೆಳ್ಳಂಬೆಳಗ್ಗೆ ಎರಡು ಕುಟುಂಬಗಳ ನಡುವೆ ನಿವೇಶನ ವಿಚಾರವಾಗಿ ಆರಂಭವಾದ ಗಲಾಟೆ, ತೀವ್ರ ಸ್ವರೂಪ ಪಡೆದ ಪರಿಣಾಮ ಇಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಕಳೆದ ಆರು ವರ್ಷಗಳಿಂದ ನಿವೇಶನ ವಿಚಾರವಾಗಿ ಆಗಾಗ್ಗೆ ಎರಡು ಕುಟುಂಬಗಳ ನಡುವೆ ಸಣ್ಣ - ಪುಟ್ಟ ಜಗಳಗಳು ನಡೆಯುತ್ತಿದ್ದು, ಕಳೆದ ಒಂದೂವರೆ ವರ್ಷಗಳಿಂದ ಈ ವ್ಯಾಜ್ಯದ ಪ್ರಕರಣ ನ್ಯಾಯಾಲಯದಲ್ಲಿದೆ ಎನ್ನಲಾಗುತ್ತಿದೆ.

ಓದಿ: ಕೃಷಿ ಕಾಯ್ದೆ ಖಂಡಿಸಿ, ಕಾಂಗ್ರೆಸ್​ನಿಂದ ಇಂದು ರಾಜಭವನ ಚಲೋ!

ಶೃಂಗಾರ್ ಎಂಬುವವರು ಶಿವಮೂರ್ತಿ ಎಂಬುವವನಿಗೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮಹೇಶ್,ಪುಟ್ಟಿ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Last Updated : Jan 20, 2021, 11:59 AM IST

ABOUT THE AUTHOR

...view details