ಚಾಮರಾಜನಗರ: ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಸಮೀಪವಿರುವ ಬಿಳಿಕಲ್ಲು ಕ್ವಾರಿಯಲ್ಲಿ ನಡೆದಿದೆ.
ಇಂದು ಬಿಳಿಕಲ್ಲುಗಳನ್ನು ತೆಗೆಯುತ್ತಿರುವಾಗ ದಿಢೀರನೇ ಕ್ವಾರಿ ಗುಡ್ಡ ಕುಸಿದಿದೆ. ಭಾರಿ ಗಾತ್ರದ ಕಲ್ಲುಗಳು ಉರುಳಿ ಬಿದ್ದಿದ್ದರಿಂದ ಟಿಪ್ಪರ್ ಮತ್ತು ವಾಹನಗಳು ಪಲ್ಟಿಯಾಗಿದೆ. ಘಟನೆಯಲ್ಲಿ ಕನಿಷ್ಠ 6 ಮಂದಿ ಕಾರ್ಮಿಕರು ಸಿಲುಕಿದ್ದಾರೆ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.