ಕರ್ನಾಟಕ

karnataka

ETV Bharat / state

ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ ಕೇಸ್: 7 ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಹೊರಕ್ಕೆ - ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್

ಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ವಿದ್ಯಾರ್ಥಿಗಳನ್ನು ತಾತ್ಕಾಲಿಕವಾಗಿ ಹಾಸ್ಟೆಲ್​ನಿಂದ ಡಿಬಾರ್ ಮಾಡಲಾಗಿದೆ.

college
college

By

Published : Mar 31, 2021, 10:27 PM IST

ಚಾಮರಾಜನಗರ:ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ವಿದ್ಯಾರ್ಥಿಗಳನ್ನು ತಾತ್ಕಾಲಿಕವಾಗಿ ಹಾಸ್ಟೆಲ್​ನಿಂದ ಡಿಬಾರ್ ಮಾಡಲಾಗಿದೆ ಎಂದು‌ ಉನ್ನತ ಮೂಲಗಳು ಈಟಿವಿ ಭಾರತಕ್ಕೆ ತಿಳಿಸಿವೆ.

ಬುಧವಾರ ಕಾಲೇಜಿನಲ್ಲಿ ರ‍್ಯಾಗಿಂಗ್​ಗೆ ಸಂಬಂದಿಸಿದಂತೆ ಪೊಲೀಸರು, ಪ್ರಾಧ್ಯಾಪಕರು ಒಳಗೊಂಡ ಸಭೆಯಲ್ಲಿ ರ‍್ಯಾಗಿಂಗ್ ಮಾಡಿದ 7 ಮಂದಿ ವಿದ್ಯಾರ್ಥಿಗಳನ್ನು ಹಾಸ್ಟೆಲಿನಿಂದ ಹೊರಗಟ್ಟಿದ್ದು ರ‍್ಯಾಗಿಂಗ್ ತಡೆಗಾಗಿ ಮೂರು ತಾಸು ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್

ವಿದ್ಯಾರ್ಥಿಗಳ ಮೇಲೆ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳದಂತೆ ಪಾಲಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಭವಿಷ್ಯದಲ್ಲಿ ಈ ರೀತಿ ಘಟನೆಗಳು ಮರುಕಳಿಸಿದಂತೆ ತಪ್ಪೊಪ್ಪಿಗೆ ನೀಡಿದ್ದರಿಂದ ಕಾಲೇಜಿನಿಂದ ಡಿಬಾರ್ ಮಾಡಿಲ್ಲ ಎನ್ನಲಾಗಿದೆ.

ಕೆಲವು ದಿನಗಳ‌ ಹಿಂದೆಯಷ್ಟೇ ತುಮಕೂರಿನ‌ ಕಿರಿಯ ವಿದ್ಯಾರ್ಥಿವೋರ್ವನ ಮೇಲೆ ಹಿರಿಯ ವಿದ್ಯಾರ್ಥಿಗಳು ಬಟ್ಟೆ ಬಿಚ್ಚಿಸಿ, ನೃತ್ಯ ಮಾಡಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದ ಆರೋಪ ಕೇಳಿಬಂದಿತ್ತು.

ABOUT THE AUTHOR

...view details