ಕರ್ನಾಟಕ

karnataka

ETV Bharat / state

ಮಹದೇಶ್ವರ ಬೆಟ್ಟ-ತಮಿಳುನಾಡು ರಸ್ತೆಯಲ್ಲಿ ಗುಡ್ಡ ಕುಸಿತ: ಸಂಚಾರಕ್ಕೆ ತಡೆ - ಚಾಮರಾಜನಗರ ಮಳೆ ಸುದ್ದಿ

ಸುರಿಯುತ್ತಿವ ಭಾರೀ ಮಳೆಗೆ ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ಮಾರ್ಗದಲ್ಲಿ ರಸ್ತೆಯ ಒಂದು ಬದಿ ಹಾಗೂ ಗುಡ್ಡವೊಂದು ಕುಸಿದು  ವಾಹನಗಳು ಸಂಚಾರಕ್ಕೆ ತಡೆಯುಂಟಾಗಿದ್ದು,  ಪೊಲೀಸರು ಜೆಸಿಬಿ ಮೂಲಕ ಮಣ್ಣಿನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಮಳೆ ಅವಾಂತರ: ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

By

Published : Oct 23, 2019, 3:26 PM IST

ಚಾಮರಾಜನಗರ: ಸುರಿಯುತ್ತಿವ ಭಾರೀ ಮಳೆಗೆ ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ಮಾರ್ಗದಲ್ಲಿ ರಸ್ತೆಯ ಒಂದು ಬದಿ ಹಾಗೂ ಗುಡ್ಡವೊಂದು ಕುಸಿದು ವಾಹನಗಳು ಸಂಚಾರಕ್ಕೆ ತಡೆಯುಂಟಾಗಿದ್ದು, ಪೊಲೀಸರು ಜೆಸಿಬಿ ಮೂಲಕ ಮಣ್ಣಿನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಮಳೆ ಅವಾಂತರ: ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಇನ್ನು ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀರು ನುಗ್ಗಿದ್ದು, ವೈದ್ಯ ಸಿಬ್ಬಂದಿ ಹಾಗೂ ರೋಗಿಗಳು ಪರದಾಡುವಂತಾಗಿದೆ. ಇನ್ನಾದರೂ ಆರೋಗ್ಯ ಇಲಾಖೆ ಎಚ್ಚೆತ್ತು ಆಸ್ಪತ್ರೆಯ ಅನಾರೋಗ್ಯ ಸರಿಪಡಿಸಬೇಕಿದೆ ಎಂದು ಗ್ರಾಪಂ ಸದಸ್ಯ ಮಹದೇವಪ್ರಸಾದ್ ಒತ್ತಾಯಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ನೀರು

ಹನೂರು ತಾಲೂಕಿನ ಮಾರ್ಟಳ್ಳಿಯಲ್ಲಿ ರಸ್ತೆ ತೀರಾ ಹದಗೆಟ್ಟಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆಯಲ್ಲೇ ನಾಟಿ ಮಾಡಿ ಸ್ಥಳೀಯ ಆಡಳಿತ ವಿರುದ್ಧ ಕಿಡಿಕಾರಿದ್ದಾರೆ.

ರಸ್ತೆಯಲ್ಲೇ ನಾಟಿ ಮಾಡಿ ಸ್ಥಳೀಯರು

ABOUT THE AUTHOR

...view details