ಚಾಮರಾಜನಗರ:ನೆರೆಮನೆಯನಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಪೊಲೀಸರು ಆರೋಪಿ ಮರಿಸ್ವಾಮಿ(56) ಎಂಬುವನನ್ನು ಬಂಧಿಸಿದ್ದಾರೆ.
ನೆರೆಮನೆಯಲ್ಲಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯನ್ನು ಈತ ಪುಸಲಾಯಿಸಿ ಅತ್ಯಾಚಾರ ಎಸಗಿದ್ದು, ಬಾಲಕಿಯು ಮನೆಯವರಿಗೆ ಗುರುವಾರ ಮಾಹಿತಿ ತಿಳಿಸಿದ್ದಾಳೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿದಾಗ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವುದು ಖಚಿತವಾಗಿದೆ.