ಕೊಳ್ಳೇಗಾಲ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 43.77 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಕೊಳ್ಳೇಗಾಲದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶಕ್ಕೆ - ಕೊಳ್ಳೇಗಾಲ ಪೊಲೀಸ್ ಠಾಣೆ
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಅಕ್ರಮವಾಗಿ ಸಂಗ್ರಹಿಸಡಲಾಗಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಳ್ಳೇಗಾಲದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ಸೀಜ್
ಪಡಿತರವನ್ನು ಕಾಳ ಸಂತೆಗೆ ಸಾಗಿಸುವ ಉದ್ದೇಶದಿಂದ ಲಿಂಗಣಾಪುರ ಸಮೀಪದ ಕಲ್ವಾರಿ ಎಜಿ ಚರ್ಚ್ ಹಿಂಭಾಗದ ಖಾಲಿ ನಿವೇಶನದಲ್ಲಿ ಸಂಗ್ರಹಿಸಿ ಇಡಲಾಗಿತ್ತು.
ದಾಳಿ ನಡೆಸಿದ ಅಧಿಕಾರಿಗಳು ಅಕ್ಕಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.