ಚಾಮರಾಜನಗರ: ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಿಸಿರುವ ಅಮಾನವೀಯ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸಾಗಡೆ ಗ್ರಾಮದ ಕಾರ್ತಿಕ್ ಎಂಬ ಯುವಕನಿಗೆ ಜಾತಿ ಕಾರಣದಿಂದ ಕ್ಷೌರ ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ನೊಂದ ಯುವಕ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಣೆ.. ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಆರೋಪ
ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಚಾಮರಾಜನಗರ
ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ತಿಕ್ ಒತ್ತಾಯಿಸಿದ್ದಾನೆ. ಈ ಸಂಬಂಧ ನೊಂದ ಯುವಕ ದೂರು ನೀಡಿದ್ರು ಕೂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
ಇದನ್ನೂ ಓದಿ:ರೇಣುಕಾಚಾರ್ಯ ನಕಲಿ ಜಾತಿ ಸರ್ಟಿಫಿಕೇಟ್ ವಿವಾದ: ಕ್ರಮಕ್ಕಾಗಿ ಬೀದಿಗಿಳಿದ ದಲಿತ ಪರ ಸಂಘಟನೆಗಳು