ಚಾಮರಾಜನಗರ:ಸ್ಥಳೀಯ ಗ್ರಾಪಂ ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿ ಕೊನೆಗೆ ಜನರೇ ಚಂದಾ ಎತ್ತಿ ರಸ್ತೆಗುಂಡಿ ಮುಚ್ಚಿರುವ ಘಟನೆ ಹನೂರು ತಾಲೂಕಿನ ಮಾರ್ಟಳ್ಳಿಯಲ್ಲಿ ಶನಿವಾರ ನಡೆದಿದೆ.
ಮನವಿ ಮಾಡಿದರೂ ತಲೆಕೆಡಿಸಿಕೊಳ್ಳದ ಜನಪ್ರತಿನಿಧಿಗಳು: ಚಂದಾ ಎತ್ತಿ ಗುಂಡಿ ಮುಚ್ಚಿದ ಸ್ಥಳೀಯರು
ಕೆಲವೇ ದಿನಗಳಲ್ಲಿ ಕಿಚ್ಚುಗುತ್ತಿ ಮಾರಮ್ಮ ದೇಗುಲ ತೆರೆಯಲಿದ್ದು, ಮಳೆಯಿಂದಾಗಿ ರಸ್ತೆ ಗುಂಡಿಯಲ್ಲಿ ನೀರು ನಿಲ್ಲುವುದರಿಂದ ಭಕ್ತರ ಅನುಕೂಲಕ್ಕಾಗಿ ಸ್ಥಳೀಯರು ರಸ್ತೆ ದುರಸ್ತಿ ಮಾಡಿ ಮಾದರಿಯಾಗಿದ್ದಾರೆ.
ಮನವಿ ಮಾಡಿದರೂ ತಲೆಕೆಡಿಸಿಕೊಳ್ಳದ ಜನಪ್ರತಿನಿಧಿಗಳು, ಚಂದಾ ಎತ್ತಿ ರಸ್ತೆಗುಂಡಿ ಮುಚ್ಚಿದ ಸ್ಥಳಿಯರು..
ಸುತ್ತ ಮುತ್ತಲಿನ ಗ್ರಾಮಕ್ಕೆ ಕೇಂದ್ರ ಸ್ಥಾನವಾಗಿರುವ ಮಾರ್ಟಳ್ಳಿಯ ರಸ್ತೆ ಹಳ್ಳ ಕೊಳ್ಳಗಳಿಂದ ತುಂಬಿ ಸಂಚಾರಕ್ಕೆ ತೊಂದರೆ ಗೀಡಾಗಿತ್ತು. ಈ ಕುರಿತು ಗ್ರಾಪಂ ಸದಸ್ಯರು, ಶಾಸಕರ ಗಮನಕ್ಕೂ ತರಲಾಗಿತ್ತು. ಆದರೆ, ಯಾವುದೇ ಕ್ರಮ ಕೈಗೊಳ್ಳದ್ದರಿಂದ ಅಂಗಡಿ ಮಾಲೀಕರು, ಆಟೋ ಚಾಲಕರು ಚಂದಾ ಎತ್ತಿ ರಸ್ತೆಗುಂಡಿಗಳನ್ನು ಮುಚ್ಚಿಸಿದ್ದಾರೆ.
ಕೆಲವೇ ದಿನಗಳಲ್ಲಿ ಕಿಚ್ಚುಗುತ್ತಿ ಮಾರಮ್ಮ ದೇಗುಲ ತೆರೆಯಲಿದ್ದು, ಮಳೆಯಿಂದಾಗಿ ರಸ್ತೆ ಗುಂಡಿಯಲ್ಲಿ ನೀರು ನಿಲ್ಲುವುದರಿಂದ ಭಕ್ತರ ಅನುಕೂಲಕ್ಕಾಗಿ ಮತ್ತು ಸ್ಥಳೀಯರು ಓಡಾಡಲು ತೊಂದರೆಯಾಗದಂತೆ ರಸ್ತೆ ದುರಸ್ತಿ ಮಾಡಿದ್ದಾರೆ.