ಕರ್ನಾಟಕ

karnataka

ETV Bharat / state

ಕಟುಕರ ಪಾಲಾಗುತ್ತಿದ್ದ ಗೋವುಗಳ ರಕ್ಷಣೆ: ಪ್ರಕರಣದಲ್ಲಿ ಪೊಲೀಸರ ಪಾತ್ರ ಶಂಕೆ - ಚಾಮರಾಜನಗರ

ಗುರುವಾರ ಮಧ್ಯಾಹ್ನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಸುಮಾರು 50 ಕ್ಕೂ ಹೆಚ್ಚು ಜಾನುವಾರುಗಳನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಕೇವಲ 9 ಜಾನುವಾರುಗಳೆಂದು ಕೇಸು ಹಾಕಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಕಟುಕರ ಪಾಲಾಗಿದ್ದ ಗೋವುಗಳನ್ನು ರಕ್ಷಿಸಿದ ಯುವಕರು

By

Published : Jul 11, 2019, 10:17 PM IST

ಚಾಮರಾಜನಗರ: ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಬಿಜೆಪಿ ಕಾರ್ಯಕರ್ತರು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಕಟುಕರ ಪಾಲಾಗಿದ್ದ ಗೋವುಗಳನ್ನು ರಕ್ಷಿಸಿದ ಯುವಕರು

ಗುರುವಾರ ಮಧ್ಯಾಹ್ನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಸುಮಾರು 50 ಕ್ಕೂ ಹೆಚ್ಚು ಜಾನುವಾರುಗಳನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಕೇವಲ 9 ಜಾನುವಾರಿಗೆ ಕೇಸು ಹಾಕಿದ್ದು, ಪ್ರಕರಣದಲ್ಲಿ ಪೊಲೀಸರ ಪಾತ್ರದ ಶಂಕೆ ವ್ಯಕ್ತವಾಗಿದೆ.

ಕೇರಳಕ್ಕೆ ನಿರಂತರವಾಗಿ ಅಕ್ರಮ ಜಾನುವಾರು ಸಾಗಾಣಿಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ABOUT THE AUTHOR

...view details