ಕರ್ನಾಟಕ

karnataka

ETV Bharat / state

ಅಪರಿಚಿತ ವಾಹನ ಡಿಕ್ಕಿ: ಬೈಕ್​ ಸವಾರ ಸಾವು - ವಾಹನ ಡಿಕ್ಕಿ

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ತಾಲ್ಲೂಕಿನ ತೆರಕಣಾಂಬಿಯಲ್ಲಿ ನಡೆದಿದೆ. ತಮಿಳುನಾಡು ನೋಂದಾಯಿತ ಬೈಕ್​ ಓಡಿಸುತ್ತಿದ್ದ ಬೈಯಣಪುರ ಗ್ರಾಮದ ಶಂಕರ್ (40) ಎಂಬುವವರು ಸಾವನ್ನಪ್ಪಿದ್ದಾರೆ.

Accident
Accident

By

Published : Jun 6, 2020, 8:43 PM IST

ಗುಂಡ್ಲುಪೇಟೆ:ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ತಾಲೂಕಿನ ತೆರಕಣಾಂಬಿಯಲ್ಲಿ ನಡೆದಿದೆ.

ತೆರಕಣಾಂಬಿಯ ಪೊಲೀಸ್ ಕ್ವಾರ್ಟರ್ಸ್​ನಿಂದ ತಾಳವಾಡಿಯ ಬೈಯಣಪುರಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದದಿದೆ. ತಮಿಳುನಾಡಿನ ನೋಂದಾಯಿತ ಬೈಕ್ ಓಡಿಸುತ್ತಿದ್ದ ಬೈಯಣಪುರ ಗ್ರಾಮದ ಶಂಕರ್ (40) ಎಂಬುವವರು ಮೃತಪಟ್ಟಿದ್ದಾರೆ.

ಬೈಕ್ ಸವಾರನ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದ್ದ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ.

ಈತ ಗಂಧದಕಡ್ಡಿ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details