ಚಾಮರಾಜನಗರ: ಕಾರು ಹಾಗೂ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಂಗಲ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ಹೆಚ್.ಡಿ ಕೋಟೆ ತಾಲೂಕಿನ ಹಂಪಾಪುರ ಗ್ರಾಮದ ರವಿ (30), ರವಿ (35). ರೇವಣ್ಣ (42), ಮಹದೇವ (52), ಶಿವಪ್ಪ (60), ರಾಚೇಗೌಡ (55), ಕೆಂಡಗಣ್ಣೇಗೌಡ (70), ನಾಗರಾಜು (75) ಹಾಗೂ ಬಸವೇಗೌಡ (76) ಹಾಗೂ ಮಹೇಶ್ (45) ಎಂಬುವರು ಗಾಯಗೊಂಡಿದ್ದಾರೆ.
ಹೆಚ್.ಡಿ ಕೋಟೆ ತಾಲೂಕಿನ ಹಂಪಾಪುರ ಗ್ರಾಮದ 12 ವರ್ಷದ ಹುಡುಗ (ಯಶವಂತ್) ಸೇರಿದಂತೆ 11 ಮಂದಿ ಭಾನುವಾರ ಸಂಜೆ 5.30ರ ವೇಳೆಯಲ್ಲಿ ಓಮ್ನಿ ಕಾರಿನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಹನೂರಿನಿಂದ ಕೊಳ್ಳೇಗಾಲ ಮಾರ್ಗವಾಗಿ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರು ಪಲ್ಟಿಯಾಗಿ 10 ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಐವರು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ಗಾಯಗಾಯಗೊಂಡ 5 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.