ಕರ್ನಾಟಕ

karnataka

ETV Bharat / state

ಬಜೆಟ್​​ನಲ್ಲಿ ಚಾಮರಾಜನಗರ ಕಡೆಗಣನೆ ಆರೋಪ: ರೈತ ಸಂಘದಿಂದ ರಸ್ತೆ ತಡೆದು ಆಕ್ರೋಶ - ಡಾ.ಗುರುಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ

ಇಂದು ಮಂಡನೆಯಾದ ರಾಜ್ಯ ಸರ್ಕಾರದ ಬಜೆಟ್​ನಲ್ಲಿ ಚಾಮರಾಜನಗರ ಜಿಲ್ಲೆಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

road-blockade-by-farmers-union-in-chamarajanagara
ರೈತಸಂಘದಿಂದ ರಸ್ತೆ ತಡೆದು ಆಕ್ರೋಶ!

By

Published : Mar 5, 2020, 6:24 PM IST

ಚಾಮರಾಜನಗರ: ಇಂದು ಮಂಡನೆಯಾದ ರಾಜ್ಯ ಸರ್ಕಾರದ ಬಜೆಟ್​ನಲ್ಲಿ ಚಾಮರಾಜನಗರ ಜಿಲ್ಲೆಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಡಾ. ಗುರುಪ್ರಸಾದ್ ನೇತೃತ್ವದಲ್ಲಿ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಜಿಲ್ಲೆಯನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಧಿಕ್ಕಾರ ಕೂಗಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.

ರೈತ ಸಂಘದಿಂದ ರಸ್ತೆ ತಡೆದು ಆಕ್ರೋಶ

ಜಿಲ್ಲೆಗೆ ಅನುದಾನ ತರುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವಿಫಲರಾಗಿದ್ದಾರೆ. ಬಜೆಟ್ ಮಂಡನೆಯಲ್ಲಿ ಚಾಮರಾಜನಗರದ ಹೆಸರೇ ನಾಪತ್ತೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು.

ABOUT THE AUTHOR

...view details