ಧಾರವಾಡ:ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಂದಿನಂತೆ ಬಸ್ ಸಂಚಾರ ಆರಂಭಗೊಂಡಿದ್ದು, ಸಾರಿಗೆ ನೌಕರರು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸದೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಚಾಮರಾಜನಗರದಲ್ಲೂ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಗೆ ಬೆಂಬಲವಿಲ್ಲ:

ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಒತ್ತಾಯಿಸಿ ಕೆಎಸ್ಆರ್ಟಿಸಿ ನೌಕರರು ಕರೆ ನೀಡಿರುವ ಬಂದ್ಗೆ ನಗರದಲ್ಲಿ ಬೆಂಬಲ ಸಿಕ್ಕಿಲ್ಲ. ಬಸ್ ಸಂಚಾರ ಎಂದಿನಂತೆ ಕಾರ್ಯಾರಂಭಿಸಿದ್ದು ಜಿಲ್ಲೆಯ ನಾಲ್ಕು ಘಟಕದಿಂದ ಬಸ್‌ಗಳ ಸಂಚಾರ ಸಾಮಾನ್ಯವಾಗಿದೆ. ಶಿವರಾತ್ರಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಎಂದಿನಂತೆ ವಿಶೇಷ ಬಸ್‌ಗಳು ಸಂಚರಿಸುತ್ತಿದ್ದು ಜಿಲ್ಲೆಯಲ್ಲಿ ಬಂದ್ ವಿಫಲವಾಗಿದೆ.
ಮಂಜಿನ ನಗರಿ ಮಡಿಕೇರಿಗೆ ತಟ್ಟದ ಸಾರಿಗೆ ನೌಕರರ ಬಂದ್ ಬಿಸಿ:
ಬಂದ್ ಬಿಸಿ ಮಂಜಿನ ನಗರಿ ಮಡಿಕೇರಿಯಲ್ಲಿ ಕಾಣಿಸುತ್ತಿಲ್ಲ. ಜಿಲ್ಲೆಯಲ್ಲಿ ಎಂದಿನಂತೆ ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಸಂಚಾರವಿದೆ. ಮಡಿಕೇರಿಯಿಂದ-ಮಂಗಳೂರು, ಮೈಸೂರು ಹಾಗೂ ಹಾಸನ ಕಡೆಗೆ ಬಸ್‌ಗಳು ಸಂಚರಿಸುತ್ತಿದ್ದು ಪ್ರಯಾಣಿಕರು ನಿರಾಳರಾಗಿದ್ದಾರೆ.