ಚಿಕ್ಕಮಗಳೂರು:ಸಂಚಾರಿ ವಿಜಯ್ ಪಾರ್ಥಿವ ಶರೀರ ಹುಟ್ಟೂರು ಪಂಚನಹಳ್ಳಿಗೆ ತಲುಪಿದ್ದು, ಅವರ ಸ್ನೇಹಿತ ರಘು ಎಂಬುವರ ತೋಟದಲ್ಲಿ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಲಾಗುತ್ತಿದೆ. ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಚಿವ ಮಾಧುಸ್ವಾಮಿ ಪಂಚನಹಳ್ಳಿಗೆ ಆಗಮಿಸಿದ್ದಾರೆ.
ಆ್ಯಂಬುಲೆನ್ಸ್ನಿಂದ ಸಂಚಾರಿ ವಿಜಯ್ ಮೃತದೇಹ ಇಳಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ.